ಸುಳ್ಯ ಠಾಣಾ ನೂತನ ಎಸ್ಐ ಆಗಿ ಈರಯ್ಯ ದೂಂತುರು ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 19. ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ನೇಮಕಗೊಂಡ ಈರಯ್ಯ ದೂಂತೂರು ಅವರು ಅಧಿಕಾರ ಸ್ವೀಕರಿಸಿದರು. ಇವರಿಗೆ ವರ್ಗಾವಣೆಗೊಂಡ ಎಸ್‌ಐ ದಿಲೀಪ್ ಜಿ.ಆರ್ ಅವರು ಅಧಿಕಾರ ಹಸ್ತಾಂತರಿಸಿದರು.


ಈರಯ್ಯ ದೂಂತೂರು ಅವರನ್ನು ಸುಳ್ಯ ಎಸ್‌ಐ ಆಗಿ ನೇಮಕ‌ ಮಾಡಿ ಸರಕಾರ ಆದೇಶ ಹೊರಡಿಸಿತ್ತು. 2014ನೇ ಬ್ಯಾಚ್‌ನ ಅಧಿಕಾರಿಯಾದ ಈರಯ್ಯ ದೂಂತುರು ಅವರು ಬಂಟ್ವಾಳ ಹಾಗೂ ವಿಟ್ಲದಲ್ಲಿ ಪ್ರೊಬೇಷನರಿ ಎಸ್‌ಐ ಆಗಿ ಬಳಿಕ ಬೆಳ್ಳಾರೆ ಠಾಣೆಯಲ್ಲಿ ಉಪನಿರೀಕ್ಷಕರಾಗಿದ್ದರು. ಬಳಿಕ ಉಪ್ಪಿನಂಗಡಿ, ಶಿರಸಿ, ಕುಂದಾಪುರದಲ್ಲಿ ಎಸ್‌ಐ ಆಗಿ ಕರ್ತವ್ಯ ನಿರ್ವಹಿಸಿದ ಅವರು ಇದೀಗ ಸುಳ್ಯದ ಎಸ್‌ಐ ಆಗಿ ನೇಮಕಗೊಂಡಿದ್ದಾರೆ.

error: Content is protected !!

Join the Group

Join WhatsApp Group