RAW ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ರವಿ ಸಿನ್ಹಾ ನೇಮಕ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂ. 18. ಹಿರಿಯ ಐಪಿಎಸ್ ಅಧಿಕಾರಿ ರವಿ ಸಿನ್ಹಾ ಅವರನ್ನು ಭಾರತದ ಬಾಹ್ಯ ಗುಪ್ತಚರ ಸಂಸ್ಥೆ RAW ನ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ ಎಂದು ಸಿಬ್ಬಂದಿ ಸಚಿವಾಲಯ ಆದೇಶ ತಿಳಿಸಿದೆ.

ರವಿ ಸಿನ್ಹಾ ಅವರು ಛತ್ತೀಸ್ ಗಢ ಕೇಡರ್ ನ 1988ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಕ್ಯಾಬಿನೆಟ್ ಸೆಕ್ರೆಟರಿಯಟ್ ನ ವಿಶೇಷ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2 ವರ್ಷಗಳ ಅವಧಿಗೆ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗ ಕಾರ್ಯದರ್ಶಿಯಾಗಿ ರವಿ ಸಿನ್ಹಾ ಅವರನ್ನು ನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Also Read  ಬಿಸಿಲಿನ ತೀವ್ರತೆಗೆ 34 ಮಂದಿ ಮೃತ್ಯು

error: Content is protected !!
Scroll to Top