ಡಿಸೆಂಬರ್ ಒಳಗೆ ಕಾಂಗ್ರೆಸ್ ಸರಕಾರ ಪತನ ➤ ಭವಿಷ್ಯ ನುಡಿದ ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 19. ಡಿಸೆಂಬರ್‌ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ ಎ೦ದು ರಾಜ್ಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಭವಿಷ್ಯ ನುಡಿದಿದ್ದಾರೆ.

ಈ ಕುರಿತು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಸಿಎಂ ಅಧಿಕಾರ ಹಂಚಿಕೆ ಸೂತ್ರವೇ ಕಾಂಗ್ರೆಸ್‌ಗೆ ಮುಳುವಾಗಲಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ನಡುವೆ ಕಲಹವೇರ್ಪಟ್ಟು ಸರ್ಕಾರ ಪತನವಾಗಲಿದೆ ಎಂದು ತಿಳಿಸಿದ್ದಾರೆ. ಇದೀಗ ಸಿದ್ದರಾಮಯ್ಯ ಬಣದವರು ಅವರೇ ಮುಂದಿನ ಐದು ವರ್ಷಗಳ ಕಾಲ ಸಿಎಂ ಎಂದು ಹೇಳಲು ಆರಂಭಿಸಿದ್ದು, ಹೀಗಾಗಿ 2023ರ ಅಂತ್ಯದ ವೇಳೆಗೆ ಸರ್ಕಾರ ಉರುಳಲಿದೆ ಎಂದು ಹೇಳಿದ್ದಾರೆ. ಎಲ್ಲವೂ ಉಚಿತ ಎಂದು ಹೇಳಿ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರನ್ನು ವಂಚಿಸುತ್ತಿದ್ದು, ಜೂ.22 ರಂದು ರಾಜ್ಯ ಬಂದ್ ಗೆ ಕರೆ ನೀಡಿರುವ ಕೈಗಾರಿಕಾ ವಾಣಿಜ್ಯ ಮಂಡಳಿ ಹೋರಾಟಕ್ಕೆ ಬಿಜೆಪಿ ಬೆಂಬಲಿಸುತ್ತದೆ ಎಂದು ಇದೇ ವೇಳೆ ತಿಳಿಸಿದ್ದಾರೆ.

Also Read  ಹಬ್ಬಕ್ಕೆ ಖಾಸಗಿ ಬಸ್ ಟಿಕೆಟ್ ದರ ಹೆಚ್ಚಿಸಿದರೆ ಲೈಸೆನ್ಸ್ ರದ್ದು- ಸಾರಿಗೆ ಇಲಾಖೆ ಎಚ್ಚರಿಕೆ

error: Content is protected !!
Scroll to Top