ಪುತ್ತೂರು: ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 20. ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ನಗರದ ಹೊರವಲಯದ ಕಲ್ಲರ್ಪೆಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.

ಮೃತ ಸವಾರನನ್ನು ನೈತಾಡಿಯ ಇಸ್ಮಾಯಿಲ್‌ ಎಂದು ಗುರುತಿಸಲಾಗಿದೆ. ಇವರು ಬೆಳಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಇಸ್ಮಾಯಿಲ್‌ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಅಪಘಾತದ ರಭಸಕ್ಕೆ ಸ್ಕೂಟರ್‌ ನಜ್ಜುಗುಜ್ಜಾಗಿದ್ದು, ಅಪಘಾತಕ್ಕೊಳಗಾದ ಮಡಿಕೇರಿ ನೊಂದಾಯಿತ ಕಾರಿನಲ್ಲಿದ್ದವರ ಕುರಿತು ಯಾವುದೇ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Also Read  ಮಾರುತಿ ಮತ್ತು ಸ್ವಿಫ್ಟ್ ಕಾರುಗಳ ನಡುವೆ ಭೀಕರ ಅಫಘಾತ ➤ ಐವರು ಸ್ಥಳದಲ್ಲೇ ಮೃತ್ಯು

error: Content is protected !!
Scroll to Top