(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯವರನ್ನು ಅಧಿಕಾರಿಗಳು ಭೇಟಿ ಮಾಡುವ ಸಂದರ್ಭದಲ್ಲಿ ಹಾಗೂ ಜಿಲ್ಲಾಧಿಕಾರಿ ಭಾಗವಹಿಸುವ ಯಾವುದೇ ಸರಕಾರಿ, ಸಭೆ, ಸಮಾರಂಭ, ಕಾರ್ಯಕ್ರಮಗಳಲ್ಲಿ ಹೂಗುಚ್ಛ ನೀಡುವುದನ್ನು ನಿಷೇಧಿಸಲಾಗಿದೆ. ಹೂಗುಚ್ಛ ನೀಡುವ ಆಸಕ್ತಿ ಇರುವವರು ಅದರ ಬದಲಿಗೆ ಪುಸ್ತಕ ನೀಡುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿರುವುದಾಗಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ತಿಳಿಸಿದ್ದಾರೆ.
ಹಾರ, ಹೂಗುಚ್ಚ ಬದಲು ಪುಸ್ತಕ ಕೊಡಿ ➤ ಡಿಸಿ ಮುಲೈ ಮುಗಿಲನ್
