(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.20. ವಿದ್ಯುತ್ ದರ ಏರಿಕೆ ಖಂಡಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರೀಸ್ ಜೂನ್ 22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ ಎನ್ನಲಾಗಿತ್ತು, ಆದರೆ ನಾವು ಬಂದ್ ಗೆ ಕರೆ ನೀಡಿಲ್ಲ ಎಂದು FKCCI ಅಧ್ಯಕ್ಷ ಬಿ.ವಿ ಗೋಪಾಲರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತಂತೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಾವು ಬಂದ್ ಗೆ ಕರೆ ನೀಡಿಲ್ಲ, ನಮಗೂ ಕರ್ನಾಟಕ ಬಂದ್ ಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ನಾವು ಈಗಾಗಲೇ ಇಂಧನ ಸಚಿವ ಕೆ ಜೆ ಜಾರ್ಜ್ ಅವರನ್ನು ಭೇಟಿಯಾಗಿ ವಿದ್ಯುತ್ ದರ ಇಳಿಕೆ ಬಗ್ಗೆ ಚರ್ಚಿಸಿದ್ದೇವೆ. ತೆರಿಗೆಯನ್ನು ಶೇ.9 ರಿಂದ ಶೇ.3ಕ್ಕೆ ಇಳಿಕೆಗೆ ಮನವಿ ಮಾಡಿದ್ದೇವೆ. ಸರ್ಕಾರ ನಮ್ಮ ಜೊತೆ ಮಾತುಕತೆ ನಡೆಸಿದೆ. ಸರ್ಕಾರ ಏನು ಮಾಡುತ್ತದೆ ಕಾದು ನೋಡುತ್ತೇವೆ ಎಂದಿದ್ದಾರೆ. ವಿದ್ಯುತ್ ದರ ಇಳಿಕೆ ಮಾಡುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಜೂನ್ 10 ರವರೆಗೆ ಗುಡುವು ನೀಡಿತ್ತು, ದರ ಹಿಂಪಡೆಯದಿದ್ದರೆ ಕೈಗಾರಿಕೆಗಳನ್ನು ಬಂದ್ ಮಾಡಿ ಪ್ರತಿಭಟನೆಯ ಎಚ್ಚರಿಕೆ ನೀಡಿತ್ತು. ಹೀಗಾಗಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ ಒಂದು ದಿನದ ಮಟ್ಟಿಗೆ ಜೂನ್ 22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ ಎನ್ನಲಾಗಿತ್ತು. ಆದರೆ ನಾವು ಬಂದ್ ಗೆ ಕರೆ ನೀಡಿಲ್ಲ ಎಂದು FKCCI ಅಧ್ಯಕ್ಷರು ಸ್ಪಷ್ಟನೆ ನೀಡಿದ್ದಾರೆ.