(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 20. ವಿಧಾನ ಪರಿಷತ್ ಗೆ ತೆರವಾಗಿರುವ 3 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಘೋಷಣೆ ಮಾಡಿದೆ.
ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರಿ ಬಳಿಕ ಹುಬ್ಬಳ್ಳಿ ಹಾಗೂ ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ವಿಧಾನ ಸಭಾ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದ ಜಗದೀಶ್ ಶೆಟ್ಟರ್ ಸೇರಿದಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಬೋಸರಾಜು ಮತ್ತು ತಿಪ್ಪಣ್ಣಪ್ಪ ಕಮಕನೂರು ಅವರಿಗೆ ಟಿಕೇಟ್ ಘೋಷಣೆ ಮಾಡಿದೆ. ನಾಳೆ ಜೂ. 20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.