ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ಪ್ರಸಕ್ತ ಸಾಲಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗಾಗಿ ಜಿಲ್ಲೆಯ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಂದ ವೆಬ್‍ಸೈಟ್: www.tw.kar.nic.in ಮೂಲಕ 2023ರ ಜುಲೈ 24ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.


ವಿವರ :
ತರಬೇತಿಯ ಅವಧಿ 2 ವರ್ಷ, ಮಾಹೆಯಾನ 10,000 ರೂ.ಗಳ ಶಿಷ್ಯ ವೇತನ ನೀಡಲಾಗುವುದು. ಆಯ್ಕೆಯಾದ ತರಬೇತಿದಾರರಿಗೆ ಕಚೇರಿ ಸ್ಥಾಪಿಸಿಕೊಳ್ಳಲು, ಕಾನೂನು ಪುಸ್ತಕಗಳನ್ನು ಖರೀದಿಸಲು ಮತ್ತು ಪೀಠೋಪಕರಣ, ಕಂಪ್ಯೂಟರ್ ಇತ್ಯಾದಿ ಖರೀದಿಸಲು ತಾಲೂಕು, ಟಿ.ಎಂ.ಸಿ ಕೇಂದ್ರ ಸ್ಥಾನಗಳಲ್ಲಿ 50,000 ರೂ.ಗಳು ಮತ್ತು ನಗರ ಸಭೆ, ಮಹಾನಗರ ಪಾಲಿಕೆಗಳಲ್ಲಿ 1 ಲಕ್ಷ ರೂ.ಗಳ ಅನುದಾನ ನೀಡಲಾಗುವುದು. ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಸಲ್ಲಿಸಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಬ್ಬಕ್ಕ ನಗರದಲ್ಲಿರುವ ಸಮಗ್ರ ಗಿರಿಜನ ಅಭಿವೃದ್ದಿ ಯೋಜನೆ, ಯೋಜನಾ ಸಮನ್ವಯಾಧಿಕಾರಿಯವರ ಕಚೇರಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಗೆ ಸಲ್ಲಿಸುವಂತೆ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಮಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

error: Content is protected !!
Scroll to Top