ಮಂಗಳೂರು: ನಾಳೆ (ಜೂ. 21) ಅಂತರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ಜಿಲ್ಲಾಡಳಿತ, ಆಯುಷ್ ಇಲಾಖೆ, ಜಿಲ್ಲಾ ಆಯುಷ್ ಮಹಾವಿದ್ಯಾಲಯ ಹಾಗೂ ಜಿಲ್ಲೆಯ ವಿವಿಧ ಯೋಗ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಾಳೆ (ಜೂ. 21) ಬೆಳಗ್ಗೆ 8 ಗಂಟೆಗೆ ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ರಾಜ್ಯ ವಿಧಾನಸಭೆಯ ಸಭಾಪತಿಗಳಾದ ಯು.ಟಿ. ಖಾದರ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್, ಸಂಸದರಾದ ಡಿ. ವಿರೇಂದ್ರ ಹೆಗ್ಗಡೆ, ಶಾಸಕರಾದ ಡಾ. ಭರತ್ ಶೆಟ್ಟಿ ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಯು, ಉಮನಾಥ್ ಎ. ಕೋಟ್ಯಾನ್, ಅಶೋಕ್ ಕುಮಾರ್ ರೈ, ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಶಾಸಕರಾದ ಕೋಟ ಶ್ರೀನಿವಾಸ್ ಪೂಜಾರಿ, ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಎಸ್.ಎಲ್ ಭೋಜೇಗೌಡ, ಪ್ರತಾಪಸಿಂಹ ನಾಯಕ್.ಕೆ, ಮಂಜುನಾಥ ಭಂಡಾರಿ ಹಾಗೂ ಮಂಗಳೂರು ಮೇಯರ್ ಜಯಾನಂದ ಅಂಚನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.

Also Read  ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳಕ್ಕೆ ನೂತನ ಗೃಹರಕ್ಷಕರ ನೇಮಕಾತಿ

error: Content is protected !!
Scroll to Top