ನೆಲ್ಯಾಡಿ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್‌ ಢಿಕ್ಕಿ ➤ ಗಂಭೀರ ಗಾಯಗೊಂಡ ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ.20. ಪಾದಚಾರಿಯೋರ್ವರಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಪಾದಚಾರಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಂಗಳವಾರದಂದು ನಡೆದಿದೆ.

ನೆಲ್ಯಾಡಿ ಸಮೀಪದ ದೋಂತಿಲ ನಿವಾಸಿ ಜಬ್ಬಾರ್ ಎಂಬವರು ಸೋಮವಾರ ರಾತ್ರಿ ಮನೆಯ ಸಮೀಪ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ಢಿಕ್ಕಿಯಾಗಿತ್ತು. ಗಂಭೀರ ಗಾಯಗೊಂಡ ಜಬ್ಬಾರ್ ರವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರದಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

 

error: Content is protected !!
Scroll to Top