ಕರ್ನಾಟಕದಲ್ಲಿ 8000 ಕೋಟಿ ಬಂಡವಾಳ ಹೂಡಲು ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿ ಆಸಕ್ತಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 20. ವಿದ್ಯುತ್ ಚಾಲಿತ ವಾಹನಗಳಿಗೆ ಅಗತ್ಯವಾದ ಲಿಥಿಯಂ ಕೋಶಗಳ ತಯಾರಿಕೆಗೆ ಹೆಸರಾಗಿರುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯು ರಾಜ್ಯದಲ್ಲಿ 8,000 ಕೋಟಿ ರೂ. ಗಳ ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿಸಿದೆ.

ಇದಕ್ಕೆ ಸಂಬಂಧಿಸಿದಂತೆ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಕಂಪನಿ ಪ್ರತಿನಿಧಿಗಳೊಂದಿಗೆ ಮೊದಲ ಹಂತದ ಸಭೆ ನಡೆಸಿದ್ದಾರೆ. ಈ ಕಂಪನಿಯು ದೇವನಹಳ್ಳಿಯ ಐಟಿಐಆರ್ ಪಾರ್ಕ್ ನಲ್ಲಿ 1000 ಎಕರೆ ಜಮೀನು ಕೇಳಿದ್ದು, ಕಂಪನಿ ಕೇಳಿರುವ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಪರಿಶೀಲಿಸಲಾಗುವುದು. ಸಿಎಂ ಜತೆಗೂ ವಿಸ್ತೃತವಾಗಿ ಚರ್ಚಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಐಬಿಸಿ ಕಂಪೆನಿಯು ರಾಜ್ಯದಲ್ಲೇ ನೆಲೆಯೂರುವಂತೆ ನೋಡಿಕೊಳ್ಳಲು ಅಗತ್ಯವಿರುವ ನೆರವು ನೀಡಲಾಗುವುದು. ರಾಜ್ಯದಲ್ಲಿ ಹೆಚ್ಚು ಹೂಡಿಕೆಯಾಗಿ, ಉದ್ಯೋಗ ಸೃಷ್ಟಿಯಾಗಬೇಕು. ಇದಕ್ಕೆ ಪೂರಕವಾದ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಕಂಪೆನಿಯ ನಿಯೋಗಕ್ಕೆ ಭರವಸೆ ನೀಡಿದರು.

 

error: Content is protected !!

Join the Group

Join WhatsApp Group