ನಿಗೂಢ ಶಂಕೆ ➤ ದಂಪತಿಯನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿದ ಗ್ರಾಮಸ್ಥರು



(ನ್ಯೂಸ್ ಕಡಬ) newskadaba.com ತೆಲಂಗಾಣ, ಜೂ. 20. ದಂಪತಿಯನ್ನು ಮರಕ್ಕೆ ನೇತು ಹಾಕಿ ಗ್ರಾಮಸ್ಥರು ಬೆತ್ತದಿಂದ ಹೊಡೆದು ಹಲ್ಲೆ ನಡೆಸಿರುವ ಘಟನೆ ತೆಲಂಗಾಣ ರಾಜ್ದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.







ಹಲ್ಲೆಗೊಳಗಾದ ದಂಪತಿಯನ್ನು ಶ್ಯಾಮಮ್ಮ ಮತ್ತು ಯಾದಯ್ಯ ಎಂದು ಗುರುತಿಸಲಾಗಿದೆ. ಇವರಿಬ್ಬರು ಸಂಗಾರೆಡ್ಡಿ ಜಿಲ್ಲೆಯ ಕೊಲ್ಕೂರು ಗ್ರಾಮದಲ್ಲಿ ನಿಗೂಢ ಕಲೆಗಳನ್ನು ಅಭ್ಯಾಸ ಮಾಡುತ್ತಿದ್ದಾರೆಂಬ ಶಂಕೆಯಿಂದ ಗ್ರಾಮದ ಜನರು ದಂಪತಿಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯ ಕುರಿತು ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ, ವಿಚಾರಣೆ ನಡೆಸಿ ಗಾಯಗೊಂಡಿದ್ದ ದಂಪತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸರು ಗ್ರಾಮಸ್ಥರ ವಿರುದ್ದ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿರುವುದಾಗಿ ತಿಳಿದುಬಂದಿದೆ.






error: Content is protected !!
Scroll to Top