ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ನುಗ್ಗಿದ ಕಾರು ➤ ಅದೃಷ್ಟವಶಾತ್ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 20. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಜಂಕ್ಷನ್ ನಲ್ಲಿ ತಿರುವು ಪಡೆದುಕೊಳ್ಳುತ್ತಿದ್ದಂತೆಯೇ ರಸ್ತೆಯ ಪಕ್ಕದಲ್ಲಿದ್ದ ಆಕ್ಟಿವಾ ಸ್ಕೂಟರ್ ಗೆ ಢಿಕ್ಕಿ ಹೊಡೆದು ಬಳಿಕ ಬಸ್ಸು ತಂಗುದಾಣಕ್ಕೆ ಢಿಕ್ಕಿಯಾದ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ತೌಡುಗೋಳಿ‌ ಕ್ರಾಸ್ ನಲ್ಲಿ ನಡೆದಿದೆ.


ಘಟನೆಯಿಂದ ಸ್ಕೂಟರ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ತಂಗುದಾಣದ ಮುಂಭಾಗದ ಕಿರುಗೋಡೆ ನೆಲಕ್ಕುರುಳಿದೆ. ನರಿಂಗಾನ ಗ್ರಾಮದ ಶಾಂತಿಪಳಿಕೆ ನಿವಾಸಿ ಅಶ್ರಫ್ ಎಂಬವರು ವಿದೇಶದಿಂದ ಮನೆಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಚಾಲಕ ಹಾಗೂ ಅಶ್ರಫ್ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

Scroll to Top