ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಅನಿವಾರ್ಯ ➤ ಯೋಗಗುರು ಗೋಪಾಲಕೃಷ್ಣ ದೇಲಂಪಾಡಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 21. “ಅಂತರಾಷ್ಟ್ರೀಯ ಯೋಗ ದಿನಾಚರಣೆ” ಇದರ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರಿಗೆ ಪೂರ್ವಭಾವಿ ಯೋಗ ತರಬೇತಿ ಶಿಬಿರ ಮಂಗಳವಾರದಂದು ಬೆಳಿಗ್ಗೆ ಜಿಲ್ಲಾ ಗೃಹರಕ್ಷಕದಳ ಕಛೇರಿ ಮೇರಿಹಿಲ್, ಮಂಗಳೂರು ಇಲ್ಲಿ ನಡೆಯಿತು.

ಖ್ಯಾತ ಯೋಗಗುರು ಗೋಪಾಲಕೃಷ್ಣ ದೇಲಂಪಾಡಿ ಇವÀರ ಮಾರ್ಗದರ್ಶನದಲ್ಲಿ ಈ ತರಬೇತಿ ಶಿಬಿರ ನಡೆಯಿತು. ಯೋಗ ಮನುಷ್ಯನ ಆರೋಗ್ಯಕ್ಕೆ ಅತೀ ಅವಶ್ಯಕ. ದೈಹಿಕ ಆರೋಗ್ಯ ಮತ್ತು ಮಾನಸಿಕ ನೆಮ್ಮದಿಗೆ ಯೋಗವನ್ನು ಪ್ರತಿಯೊಬ್ಬರು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶ್ರೀ ಗೋಪಾಲಕೃಷ್ಣ ದೇಲಂಪಾಡಿ ಅವರು ಕರೆ ನೀಡಿದರು. ದಿನದ 8 ಗಂಟೆಗಳ ಕಾಲ ನಿಂತುಕೊಂಡು ಒತ್ತಡದ ಕೆಲಸ ಮಾಡುವ ಗೃಹರಕ್ಷಕರಿಗೆ ಯೋಗ ಅತ್ಯಂತ ಅನಿವಾರ್ಯ ಎಂದು ಅವರು ನುಡಿದರು. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರ ನೇತೃತ್ವದಲ್ಲಿ ಈ ಶಿಬಿರ ನಡೆಯಿತು. ಸುಮಾರು 25 ಮಂದಿ ಗೃಹರಕ್ಷಕರು ಈ ಶಿಬಿರದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಯೋಗ ಶಿಕ್ಷಕರಾದ ಕಾರ್ತಿಕ್, ನೀನಾ ಪೈ, ಭಾರತಿ ಎಸ್ ರಾವ್, ಸುಮಾ ಶೆಟ್ಟಿ ಉಪಸ್ಥಿತರಿದ್ದರು. ಹಿರಿಯ ಗೃಹರಕ್ಷಕರಾದ ಸುನಿಲ್ ಕುಮಾರ್ ಪಿ, ದಿವಾಕರ್, ಅರವಿಂದ್, ರಾಜೇಶ್ ಗಟ್ಟಿ, ಕನಕಪ್ಪ, ನಿಖಿಲ್, ದಿವ್ಯಾ ಪೂಜಾರಿ, ಶುಭ, ಮರಿಯ ಮೋಲಿ, ಸುಮಂತ್, ಸಂತೋಷ್, ಜ್ಞಾನೇಶ್ ಮುಂತಾದವರು ಉಪಸ್ಥಿತರಿದ್ದರು.

Also Read  ಇಂದು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಾದೇಶಿಕ ಭಾಷಾ ತರಬೇತಿ

error: Content is protected !!
Scroll to Top