ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ  ವೇಳೆ ಲ್ಯಾಪ್‌ಟಾಪ್, ಪಾಸ್‌ಪೋರ್ಟ್ ಇದ್ದ ಬ್ಯಾಗ್ ಕಳವು! ➤ ದೂರು ದಾಖಲು

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂ.  21. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ಲ್ಯಾಪ್‌ಟಾಪ್ ಮತ್ತು ಪಾಸ್‌ಪೋರ್ಟ್ ಇದ್ದ ಬ್ಯಾಗ್ ಕಳವಾದ ಬಗ್ಗೆ ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ.

ರಂಜಿತ್ ಎಂಬವರು ಜೂ.15ರಂದು ರಾತ್ರಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುವ ವೇಳೆ ಲ್ಯಾಪ್‌ ಟಾಪ್ ಮತ್ತು ಪಾಸ್‌ಪೋರ್ಟ್ ಇದ್ದ ಬ್ಯಾಗ್‌ನ್ನು ಸೀಟಿನ ಮೇಲ್ಭಾಗದ ಕ್ಯಾರಿಯರ್‌ನಲ್ಲಿಟ್ಟಿದ್ದರು, ಮರುದಿನ ಬೆಳಗ್ಗೆ ಮಂಗಳೂರಿನ ಪಿವಿಎಸ್ ಸರ್ಕಲ್ ಬಳಿ ನೋಡಿದಾಗ ಬ್ಯಾಗ್ ಕಳವಾಗಿತ್ತು. ಬಿ.ಸಿರೋಡ್‌ನಲ್ಲಿ ಇಳಿದ ಇಬ್ಬರು ಪ್ರಯಾಣಿಕರ ಮೇಲೆ ಗುಮಾನಿ ವ್ಯಕ್ತಪಡಿಸಿದ್ದು ಅವರಿಗೆ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿತ್ತು ಎಂದು ರಂಜಿತ್ ದೂರು ದಾಖಲಿಸಿದ್ದಾರೆ.

Also Read  ಕೇಂದ್ರದ 5ಕೆಜಿ ಸೇರಿ ಹತ್ತು ಕೆಜಿ ಅಕ್ಕಿ ಕೊಡುತ್ತಾರೋ ಎಂದು ಸ್ಪಷ್ಟನೆ ನೀಡಬೇಕು ➤ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

 

 

 

error: Content is protected !!
Scroll to Top