ಮೀನುಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಮಂಕಾಳ ಎಸ್. ವೈದ್ಯ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 21. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯ ಅವರನ್ನು ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಆಡಳಿತ ಮಂಡಳಿಯ ನಿರ್ದೇಶಕ ಹಾಗೂ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಇತ್ತೀಚೆಗೆ ಸಚಿವರು ನಗರದ ಹೊಯ್ಗೆ ಬಜಾರ್‍ ಗೆ ಭೇಟಿ ನೀಡಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಕೇಂದ್ರ ಕಚೇರಿಯಲ್ಲಿ ನಿಗಮದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನಿಗಮದ ಕಾರ್ಯ ಚಟುವಟಿಕೆಗಳ ಮಾಹಿತಿ ಪಡೆದು ಅಭಿವೃದ್ಧಿ ಬಗ್ಗೆ ಮಾರ್ಗದರ್ಶನ ನೀಡಿದರು. ನಿಗಮದ ಅಧಿಕಾರಿ, ಸಿಬ್ಬಂದಿಗಳಿಗೆ ತಮ್ಮ ಅಧಿಕಾರದ ಅವಧಿಯಲ್ಲಿ ನಿಗಮವನ್ನು ಲಾಭಾಂಶದತ್ತ ಕೊಂಡೊಯ್ಯುವ ಬಗ್ಗೆ ಸೂಕ್ತ ಸಲಹೆ ಸೂಚನೆ ನೀಡಿದರು. ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕೆ. ಗಣೇಶ್, ಪ್ರಧಾನ ವ್ಯವಸ್ಥಾಪಕ ಮಹೇಶ್ ಕುಮಾರ್ ಯು ಮತ್ತು ಮೀನುಗಾರಿಕೆ ಜಂಟಿ ನಿರ್ದೇಶಕ ಹರೀಶ್‍ ಕುಮಾರ್, ಮುಖಂಡರಾದ ಮಿಥುನ್ ರೈ, ಮೀನುಗಾರ ಮುಖಂಡರಾದ ಚೇತನ್ ಬೆಂಗ್ರೆ ಹಾಗೂ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.

Also Read  ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ ➤ 6 ಮಂದಿಯ ಮಧ್ಯಂತರ ಜಾಮೀನು ಅರ್ಜಿ ವಜಾ

error: Content is protected !!
Scroll to Top