ಪುತ್ತೂರು: ಯುವಕನಿಗೆ ಹಲ್ಲೆ, ಜೀವಬೆದರಿಕೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 21. ಯುವಕನೋರ್ವನಿಗೆ ಹಲ್ಲೆ ನಡೆಸಿದ ಘಟನೆ ಮಂಗಳವಾರದಂದು ಸಂಜೆ ತಾಲೂಕಿನ ನರಿಮೊಗರು ಗ್ರಾಮದ ಪುರುಷಕಟ್ಟೆ ಎಂಬಲ್ಲಿ ನಡೆದಿದೆ.


ಹಲ್ಲೆಗೊಳಗಾದವರನ್ನು ನರಿಮೊಗರು ನಿವಾಸಿ ಪ್ರವೀಣ್ ಆಚಾರ್ಯ ಎಂದು ಗುರುತಿಸಲಾಗಿದೆ. ಇಲ್ಲಿನ ಇಂದ್ರನಗರ, ಕಟ್ಟೆ ನಿವಾಸಿ ಪ್ರವೀಣ್ ಎಂಬಾತ ಹಲ್ಲೆ ನಡೆಸಿದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರವೀಣ್ ಮತ್ತು ಪ್ರವೀಣ್ ಆಚಾರ್ಯ ಇಬ್ಬರೂ ಈ ಹಿಂದೆ ಬಿಜೆಪಿಯ ಕಾರ್ಯಕರ್ತರಾಗಿದ್ದರು. ಬಳಿಕ ಪ್ರವೀಣ್ ಆಚಾರ್ಯ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದರು. ಇದೀಗ ರಾಜಕೀಯ ವಿಚಾರಕ್ಕೆ ಸಂಬಂಧಿಸಿ ಪ್ರವೀಣ್ ಆಚಾರ್ಯ ಅವರ ಮೇಲೆ ಹಲ್ಲೆ ನಡೆಸಿದ ಪ್ರವೀಣ್ ಬಳಿಕ ಮನೆಯ ಬಳಿ ಬಂದು ಜೀವ ಬೆದರಿಕೆ ಒಡ್ಡಿರುವುದಾಗಿ ಆರೋಪಿಸಲಾಗಿದೆ. ಹಲ್ಲೆಗೊಳಗಾದ ಪ್ರವೀಣ್ ಆಚಾರ್ಯ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  Days Associated With Play 2024 Involves Playstation Store Ps Blog

error: Content is protected !!