ನಂದಿನಿ ಹಾಲಿನ ದರ ಹೆಚ್ಚಳ ಸಾಧ್ಯತೆ ➤ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 21. ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಸಿಎಂ ಆಪ್ತ ಭೀಮಾ ನಾಯ್ಕ್ ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ ಬೆನ್ನಲ್ಲೇ ನಂದಿನಿ ಹಾಲಿನ ದರ 5 ರೂ. ಹೆಚ್ಚಳದ ಸುಳಿವು ನೀಡಿದ್ದಾರೆ.

ಈ ಕುರಿತಂತೆ ಮಾತನಾಡಿದ ಅವರು, ಈಗಾಗಲೇ ಹಾಲಿನ ದರ 5 ರೂ. ಏರಿಕೆಗೆ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚಿಸಿದ ಬಳಿಕ ತೀರ್ಮಾನ ಕೈಗೊಳ್ಳುತ್ತೇವೆ. ಎಲ್ಲಾ ಹಾಲು ಒಕ್ಕೂಟಗಳು 5 ರೂ. ದರ ಹೆಚ್ಚಳಕ್ಕೆ ಬೇಡಿಕೆ ಇಟ್ಟಿವೆ. ದರ ಹೆಚ್ಚಿಸುವುದಲ್ಲದೇ, ಗುಣಮಟ್ಟದ ಹಾಲು, ಮೊಸರು ಹಾಗೂ ತುಪ್ಪವನ್ನು ಗ್ರಾಹಕರಿಗೆ ಒದಗಿಸಲು ಆದ್ಯತೆ ನೀಡಲಿದ್ದೇವೆ ಎಂದು ಭೀಮಾ ನಾಯ್ಕ್ ಹೇಳಿದ್ದಾರೆ.

Also Read  ಹೊಸ ಉತ್ಪನ್ನ ಬಿಡುಗಡೆಗೆ ಮುಂದಾದ KMF..!

error: Content is protected !!
Scroll to Top