ಪ್ರಧಾನಿ ಮೋದಿಯ ವಿರುದ್ಧ ಧ್ವನಿಯೆತ್ತಿದ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ► ಮೂರು ವರ್ಷಗಳಲ್ಲಿ 30 ಪತ್ರ ಬರೆದರೂ ಮೋದಿ ಉತ್ತರಿಸಿಲ್ಲ: ಅಣ್ಣಾ ಹಜಾರೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ.24. ತಾನು ನಡೆಸಿದ ಚಳವಳಿಯ ಮೂಲಕ ಸಿಎಂ ಅರವಿಂದ್ ಕೇಜ್ರಿವಾಲ್ ರಾಜಕೀಯಕ್ಕೆ ಪ್ರವೇಶಿಸಿದ್ದಾರೆ ಎಂದು ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಅವರು ವಾಗ್ದಾಳಿ ನಡೆಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧವೂ ಧ್ವನಿ ಎತ್ತಿದ್ದಾರೆ.

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅಣ್ಣಾ ಹಜಾರೆ, ನಾನು ಪ್ರಧಾನಿ ಮೋದಿಯವರಿಗೆ 30ಕ್ಕೂ ಅಧಿಕ ಪತ್ರಗಳನ್ನು ಬರೆದಿದ್ದೇನೆ, ಆದರೆ ಒಂದಕ್ಕೂ ಪ್ರತಿಕ್ರಿಯೆ ಕೊಟ್ಟಿಲ್ಲ ಎಂದು ಆರೋಪಿಸಿದರು. ಕಳೆದ ಮೂರು ವರ್ಷಗಳಲ್ಲಿ ನಾನು 30ಕ್ಕೂ ಹೆಚ್ಚು ಪತ್ರಗಳನ್ನು ಪ್ರಧಾನಿಗೆ ಬರೆದಿದ್ದೆ. ಆದರೆ ಯಾವುದಕ್ಕೂ ಉತ್ತರ ಕೊಟ್ಟಿಲ್ಲ. ಮೋದಿಯವರಿಗೆ ಪ್ರಧಾನಿಗಿರಿಯಿಂದ ಅಹಂಕಾರ ಬಂದಿದೆ ಎಂದು ದೂರಿದರು. ರೈತರ ವಿಚಾರದಲ್ಲಿ ಮಾರ್ಚ್ 23ರಿಂದ ಅಣ್ಣಾ ಹಜಾರೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಬೆಂಬಲ ನೀಡುವಂತೆ ಮನವಿ ಮಾಡುವ ನಿಟ್ಟಿನಲ್ಲಿ ಹಜಾರೆ ಅವರು ಮೂರು ಸಾರ್ವಜನಿಕ ಸಮಾವೇಶಗಳಲ್ಲಿ ಮಾತನ್ನಾಡಿದ್ದರು. ಹಿಂದೆಂದೂ ಕಂಡರಿಯದ ರೀತಿಯಲ್ಲಿ ದೊಡ್ಡ ಪ್ರಮಾಣದ ಪ್ರತಿಭಟನೆ ನಡೆಯಲಿದೆ ಎಂದು ಅಣ್ಣಾ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

Also Read  ಸಿಎಎ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈ ಕಮಿಷನರ್

error: Content is protected !!
Scroll to Top