30 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ!

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 22. ಕಳೆದ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಳೆ ಆರೋಪಿಯನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ.

ಬಂಧಿತ ಆರೋಪಿಯನ್ನು ಹಾವೇರಿ ಮೂಲದ ಪ್ರಸ್ತುತ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕು ನಿವಾಸಿ ಹೊನ್ನ ಯಾನೆ ಹೊನ್ನಪ್ಪ(55) ಎಂದು ಗುರುತಿಸಲಾಗಿದೆ. ಶಂಕರನಾರಾಯಣ ಗ್ರಾಮದಲ್ಲಿ 1993ರಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ, ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಈತನನ್ನು ಜೂ. 20ರಂದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಶಂಕರನಾರಾಯಣ ಪೊಲೀಸರು ಬಂಧಿಸಿ, ಜೂ.21ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈತನ ವಿರುದ್ಧ ಮಂಗಳೂರು ಬಂದರು ಠಾಣೆ, ಕುಂದಾಪುರ ಠಾಣೆ ಹಾಗೂ ಕಾರ್ಕಳ ನಗರ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ.

Also Read  ಕೊರೋನಾ ಸೋಂಕು| ಪ್ರಣಬ್‌ ಮುಖರ್ಜಿ ಆರೋಗ್ಯ ಗಂಭೀರ, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ

 

 

 

error: Content is protected !!
Scroll to Top