ಮರ್ಧಾಳ: ಚಿನ್ನದಂಗಡಿ ಶುಭಾರಂಭದ ಖುಷಿಯಲ್ಲಿದ್ದ ಯುವಕನಿಗೆ ಅಪಘಾತ ➤ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ – ಸಾವಿನ ಸುತ್ತ ಅನುಮಾನದ ಹುತ್ತ

(ನ್ಯೂಸ್ ಕಡಬ) newskadaba.com ಕಡಬ, ಜೂ.22. ಚಿನ್ನದ ಅಂಗಡಿ ಉದ್ಘಾಟನೆಯ ಬ್ಯುಸಿಯಲ್ಲಿದ್ದ ಯುವಕನೋರ್ವ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಗುರುವಾರದಂದು ಕಂಡುಬಂದಿದೆ.

ಮೃತ ಯುವಕನನ್ನು ಕಡಬ ನಿವಾಸಿ ನಾಗಪ್ರಸಾದ್ ಎಂದು ಗುರುತಿಸಲಾಗಿದೆ. ನಾಗಪ್ರಸಾದ್ ಮಾಲೀಕತ್ವದಲ್ಲಿ ಮರ್ಧಾಳದ ಮಸೀದಿ ಬಿಲ್ಡಿಂಗ್ ನಲ್ಲಿ ಇಂದು (ಜೂನ್ 22) ಐಶ್ವರ್ಯ ಗೋಲ್ಡ್ ಹೆಸರಿನ ಚಿನ್ನದಂಗಡಿ ಶುಭಾರಂಭಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ತಯಾರಿ ನಡೆಸಿಕೊಂಡಿದ್ದರು. ಇಂದು ಬೆಳಿಗ್ಗೆ ಸಕಲೇಶಪುರ ಠಾಣಾ ವ್ಯಾಪ್ತಿಯ ಗುಂಡ್ಯ ಸಮೀಪ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ. ಘಟನೆಯ ಬಗ್ಗೆ ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದು, ತನಿಖೆಯ ನಂತರವಷ್ಟೇ ನಿಖರ ಕಾರಣ ತಿಳಿದುಬರಬೇಕಿದೆ.

Also Read  ದ.ಕ. ಜಿಲ್ಲೆ: ನಾಳೆಯಿಂದ ಎಲ್ಲಾ ದಿನಸಿ ಅಂಗಡಿ, ತರಕಾರಿ,‌ಫ್ರೂಟ್ ಅಂಗಡಿಗಳು 12 ಗಂಟೆಯವರೆಗೆ ಓಪನ್

error: Content is protected !!
Scroll to Top