(ನ್ಯೂಸ್ ಕಡಬ) newskadaba.com ಕೆಮ್ಮಾರ, ಜೂ. 22. ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಮೋಹನಾಂಗಿಯವರು ಶಾಲಾ ಮಕ್ಕಳಿಗೆ ಯೋಗಾಭ್ಯಾಸ ಮಾಡುವ ಮೂಲಕ ಚಾಲನೆ ನೀಡಿದರು ಮತ್ತು ಕಾರ್ಯಕ್ರಮದ ನೇತೃತ್ವವನ್ನು ವಹಿಸಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜಯಶ್ರೀ ಎಮ್. ಮಾತನಾಡಿ ಆರೋಗ್ಯವಂತ ಜನತೆಯು ದೇಶದ ಶಕ್ತಿಯಾಗಿದೆ. ಈ ನಿಟ್ಟಿನಲ್ಲಿ ದೇಶಾದ್ಯಂತ ಈ ಯೋಗ ದಿನವನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಉತ್ತಮ ಆಹಾರದ ಜೊತೆಗೆ ದೇಹ ದಂಡನೆಯ ಮೂಲಕ ನಮ್ಮ ಆರೋಗ್ಯವನ್ನು ಸದೃಢಗೊಳಿಸುವ ಬಗ್ಗೆ ಮಕ್ಕಳಿಗೆ ವಿಶೇಷ ಭೋಧನೆ ಮಾಡಿದರು. ಈ ಸಂದರ್ಭದಲ್ಲಿ ಶಿಕ್ಷಕ ವೃಂದದವರಾದ ಶ್ರೀಮತಿ ಸುಮನಾ, ಶ್ರೀಮತಿ ದಿವ್ಯ, ವೆಂಕಟರಮಣ ಭಟ್, ಶಾಲಾ ಗೌರವ ಶಿಕ್ಷಕ ಜುನೈದ್, ವಿದ್ಯಾರ್ಥಿ ವಿದ್ಯಾರ್ಥಿನಿಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.