ಸುಬ್ರಹ್ಮಣ್ಯ: ಕುಮಾರಸ್ವಾಮಿ ವಿದ್ಯಾಲಯದಲ್ಲಿ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ. 22. ಕುಮಾರಸ್ವಾಮಿ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ವಿಶ್ವನಾಥ ನಡುತೋಟ, ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ಯೋಗದ ಮಹತ್ವದ ಮಕ್ಕಳಿಗೆ ತಿಳಿಸಿಕೊಟ್ಟರು. ನಂತರ ವಿದ್ಯಾರ್ಥಿಗಳಿಂದ ವಿವಿಧ ಯೋಗ ಪ್ರದರ್ಶನಗಳು ನಡೆದವು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಚಂದ್ರಶೇಖರ್ ನಾಯರ್, ಶಾಲಾ ಮುಖ್ಯ ಶಿಕ್ಷಕಿ ವಿದ್ಯಾರತ್ನ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸಂರ್ಕೀತ್ ಹೆಬ್ಬಾರ್ ಹಾಗೂ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.

error: Content is protected !!
Scroll to Top