(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 22. ಬೈಕ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸವಾರ ಮೃತಪಟ್ಟ ಘಟನೆ ಮಂಗಳೂರು ಹೊರ ವಲಯದ ಗುರುಪುರದಲ್ಲಿ ನಡೆದಿದೆ.

ಮೃತ ಸವಾರನನ್ನು ಬಂಟ್ವಾಳ ತಾಲೂಕಿನ ಕರಿಯಂಗಳ ನಿವಾಸಿ ಸಂತೋಷ್ ಪೂಜಾರಿ (38) ಎಂದು ಗುರುತಿಸಲಾಗಿದೆ. ವಾಮಜೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಗುರುಪುರ ಶಾಖೆಯ ಉದ್ಯೋಗಿಯಾಗಿದ್ದ ಇವರು, ಬೆಳಗ್ಗೆ ಮನೆಯಿಂದ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಮೂಡಬಿದಿರೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತ ಪಟ್ಟಿದ್ದಾರೆ ಎನ್ನಲಾಗಿದೆ.





