ರಾಜ್ಯ ಸರ್ಕಾರ ಐದು ಗ್ಯಾರಂಟಿ ಜಾರಿಗೊಳಿಸದಿದ್ದಲ್ಲಿ ಅಧಿಕಾರ ಬಿಟ್ಟು ತೊಲಗಲಿ ➤ ಬಿಎಸ್‌‌ವೈ

(ನ್ಯೂಸ್ ಕಡಬ) newskadaba.com ದಾವಣಗೆರೆ, ಜೂ. 22. ಚುನಾವಣಾ ಸಂದರ್ಭ ಘೋಷಿಸಿರುವ ಐದು ಯೋಜನೆಗಳನ್ನು ಅನುಷ್ಠಾನ ಮಾಡಲು ಆಗದೇ ಇದ್ದರೆ ಕಾಂಗ್ರೆಸ್ ಸರ್ಕಾರವು ಅಧಿಕಾರ ಬಿಟ್ಟು ತೊಲಗಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರನ್ನು ಮರಳು ಮಾಡಲು ಕಾಂಗ್ರೆಸ್ ದಿನಕ್ಕೊಂದು ನಾಟಕ ಆಡುತ್ತಿದೆ. ಅನ್ನಭಾಗ್ಯ ಯೋಜನೆಯಡಿ ಹತ್ತು ಕೆ.ಜಿ ಅಕ್ಕಿ ಕೊಡುವುದಾಗಿ ಸಿದ್ದರಾಮಯ್ಯರವರು ಕೇಂದ್ರ ಸರ್ಕಾರವನ್ನು ಕೇಳಿ ಭರವಸೆ ಕೊಟ್ಟಿದ್ದಾರಾ? ಕೇಂದ್ರ ಸರ್ಕಾರ ಈಗಾಗಲೇ 5 ಕೆಜಿ ಅಕ್ಕಿ‌ ಕೊಡುತ್ತಿದೆ. ಇನ್ನು ಚುನಾವಣೆಯಲ್ಲಿ ಗೆಲ್ಲಬೇಕು ಅಂತ ಅವರೇ ಭರವಸೆ ಕೊಟ್ಟಿದ್ದು ಸಿದ್ದರಾಮಯ್ಯ ಭರವಸೆ ಕೊಟ್ಟಂತೆ 10 ಕೆಜಿ ಅಕ್ಕಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

Also Read  ಕೇಂದ್ರದ 5ಕೆಜಿ ಸೇರಿ ಹತ್ತು ಕೆಜಿ ಅಕ್ಕಿ ಕೊಡುತ್ತಾರೋ ಎಂದು ಸ್ಪಷ್ಟನೆ ನೀಡಬೇಕು ➤ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

error: Content is protected !!
Scroll to Top