ಗುಂಡ್ಯ: ಕಂಟೇನರ್ ಹಾಗೂ ಕಾರಿನ ನಡುವೆ ಅಪಘಾತ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ. 22. ಕಂಟೇನರ್ ಹಾಗೂ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾ. ಹೆದ್ದಾರಿಯ ಗುಂಡ್ಯದಲ್ಲಿ ನಡೆದಿದೆ.


ಧರ್ಮಸ್ಥಳದಿಂದ ಗುಂಡ್ಯ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕಾರು ಹಾಗೂ ಕಂಟೇನರ್ ನಡುವೆ ಗುಂಡ್ಯ ಸಮೀಪ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

error: Content is protected !!
Scroll to Top