ನೈಸರ್ಗಿಕ ವಿಕೋಪ ನಿರ್ವಹಣೆಗೆ ಸಂಪುಟ ಉಪಸಮಿತಿ ರಚಿಸಿ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 22. ನೈಸರ್ಗಿಕ ವಿಕೋಪ ನಿರ್ವಹಣೆಗೆ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ 6 ಸಚಿವರ ಸಂಪುಟ ಉಪಸಮಿತಿಯನ್ನು ರಚಿಸಿ ರಾಜ್ಯಸರಕಾರ ಆದೇಶಿಸಿದೆ.

ರಾಜ್ಯದಲ್ಲಿನ ಬರ, ಪ್ರವಾಹ ಮತ್ತು ನೈಸರ್ಗಿಕ ವಿಕೋಪಗಳಿಂದ ಉಂಟಾಗಬಹುದಾದ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಹಾಗೂ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ನಿರ್ಣಯಿಸಲು ಮತ್ತು ಅಗತ್ಯ ನಿರ್ದೇಶನಗಳನ್ನು ನೀಡಲು ಸಚಿವ ಸಂಪುಟ ಉಪಸಮಿತಿಗೆ  ಜವಾಬ್ದಾರಿ ನೀಡಲಾಗಿದೆ. ಈ ಉಪಸಮಿತಿ ಸದಸ್ಯರಾಗಿ ಸಚಿವ ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಎನ್.ಚಲುವರಾಯಸ್ವಾಮಿ, ಎಸ್.ಎಸ್.ಮಲ್ಲಿಕಾರ್ಜುನ ಹಾಗೂ ಕೆ.ಎನ್. ರಾಜಣ್ಣ ರವರನ್ನು ಆಯ್ಕೆ ಮಾಡಲಾಗಿದೆ.

Also Read  ಅಂಗನವಾಡಿ ಕೇಂದ್ರದಲ್ಲಿ ಭರ್ಜರಿ ಉದ್ಯೋಗಾವಕಾಶ - ಆಸಕ್ತರಿಂದ ಅರ್ಜಿ ಆಹ್ವಾನ

error: Content is protected !!
Scroll to Top