ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 22. ಅಪರಿಚಿತ ಮಹಿಳೆಯ ಮೃತದೇಹವೊಂದು ಬಂಟ್ವಾಳ ಪುರಸಭಾ ವ್ಯಾಪ್ತಿಯ ಕಂಚಿಕಾರ್ ಪೇಟೆಯ ಕೂಟೇಲು ಸೇತುವೆ ಸಮೀಪ ನೇತ್ರಾವತಿ ನದಿಯಲ್ಲಿ ಪತ್ತೆಯಾದ ಬಗ್ಗೆ ವರದಿಯಾಗಿದೆ.

ಪುರಸಭಾ ಸದಸ್ಯ ಮೊಹಮ್ಮದ್ ಇಕ್ಬಾಲ್ ರವರು ಬಂಟ್ವಾಳ ಪೇಟೆ ಕಡೆ ಹೋಗುವಾಗ ಕೂಟೇಲು ಸೇತುವೆ ಸಮೀಪದಲ್ಲಿ ಮಹಿಳೆಯ ಚಪ್ಪಲಿ ಕಂಡು ಬಂದಿದೆ. ಇದರಿಂದಾಗಿ ಅವರು ಸ್ವಲ್ಪ ಮುಂದಕ್ಕೆ ಹೋಗಿ ನೋಡಿದಾಗ ಮಹಿಳೆಯ ಮೃತದೇಹ ಕಂಡು ಬಂದಿದೆ ಎನ್ನಲಾಗಿದೆ. ಕೂಡಲೇ ಅವರು ಈ ಕುರಿತು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹ ಮೇಲಕ್ಕೆತ್ತಿ, ಬಳಿಕ ಅಪರಿಚಿತ ಮಹಿಳೆಯ ಬಗ್ಗೆ ಗುರುತು ಪತ್ತೆಗೆ ಮನವಿ ಮಾಡಿದ್ದು, ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.

Also Read  ವಿಧಾನಪರಿಷತ್ ಚುನಾವಣೆ ➤ ದ.ಕ. ಜಿಲ್ಲೆಯಲ್ಲಿ ಶ್ರೀನಿವಾಸ್ ಪೂಜಾರಿ ಹಾಗೂ ಮಂಜುನಾಥ್ ಭಂಡಾರಿಗೆ ಜಯ

error: Content is protected !!
Scroll to Top