(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಹಜ್ ಯಾತ್ರೆ ಕೆೃಗೊಳ್ಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಮಂಗಳೂರಿನಲ್ಲಿ ಹಜ್ ಭವನ ನಿರ್ಮಾಣ ಮಾಡಲಾಗುವುದು ಎಂಬ ಸಚಿವ ಝಮೀರ್ ಅಹಮದ್ ಖಾನ್ ಅವರ ಹೇಳಿಕೆಯನ್ನು ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಉಪಾಧ್ಯಕ್ಷರೂ ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ಎಂ ಪಿ. ಮೊಯಿದಿನಬ್ಬ ಸ್ವಾಗತಿಸಿದ್ದಾರೆ. ಹಜ್ ಭವನ ನಿರ್ಮಾಣ ಕಾರ್ಯವನ್ನು ಅತ್ಯಂತ ಶೀಘ್ರವಾಗಿ ಕೆೃಗೆತ್ತಿಕೊಂಡು ದ.ಕ. ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಿಂದ ಹಜ್ ಯಾತ್ರೆ ಕೈಗೊಳ್ಳುವ ಯಾತ್ರಿಕರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಒತ್ತಾಯಿಸಿದ್ದಾರೆ.
ಹಜ್ ಭವನ ನಿರ್ಮಾಣದ ಝಮೀರ್ ಅಹ್ಮ್ ಹೇಳಿಕೆ ಸ್ವಾಗತಾರ್ಹ ➤ ಜಿಲ್ಲಾ ಕಾಂಗ್ರೆಸ್ ಸದಸ್ಯ ಎಂ.ಪಿ. ಮೊಯ್ದಿನಬ್ಬ
