ಕಡಬ: ಚಿನ್ನದಂಗಡಿ ಶುಭಾರಂಭಕ್ಕೂ ಮುನ್ನ ನಾಗಪ್ರಸಾದ್ ಸಾವು ಪ್ರಕರಣ ➤ ಅನುಮಾನಗಳಿಗೆ ತೆರೆ ಎಳೆದ ಪೋಸ್ಟ್ ಮಾರ್ಟಂ ರಿಪೋರ್ಟ್..!

(ನ್ಯೂಸ್ ಕಡಬ) newskadaba.com ಕಡಬ, ಜೂ. 23. ಚಿನ್ನದ ಅಂಗಡಿಯ ಉದ್ಘಾಟನೆಯ ದಿನವೇ ಗುಂಡ್ಯದ ಕೆಂಪು ಹೊಳೆ ಸಮೀಪ ಅಪಘಾತದಲ್ಲಿ ಮೃತಪಟ್ಟ ನಾಗಪ್ರಸಾದ್ ಪೋಸ್ಟ್ ಮಾರ್ಟಂ ವರದಿ ಬಂದಿದ್ದು, ಸಹಜ ರಸ್ತೆ ಅಪಘಾತಕ್ಕೆ ಬಲಿಯಾಗಿರುವುದಾಗಿ ತಿಳಿದು ಬಂದಿದೆ.

ಮರ್ಧಾಳದಲ್ಲಿ ಉದ್ಘಾಟನೆಗೆ ಸಜ್ಜಾಗಿದ್ದ ಐಶ್ವರ್ಯ ಗೋಲ್ಡ್ ಮಾಲಕ ಕಡಬ ನಿವಾಸಿ ದಯಾನಂದ ಆಚಾರ್ಯ ಎಂಬವರ ಪುತ್ರ ನಾಗಪ್ರಸಾದ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಬಗ್ಗೆ ಸಾರ್ವಜನಿಕವಾಗಿ ಹಲವು ಅನುಮಾನಗಳಿದ್ದ ಕಾರಣ ಪೊಲೀಸರು ಕೂಡ ಪೋಸ್ಟ್ ಮಾರ್ಟಮ್ ವರದಿಗಾಗಿ ಕಾಯುತ್ತಿದ್ದರು. ಇದೀಗ ಪೋಸ್ಟ್ ಮಾರ್ಟಮ್ ವರದಿ ಬಂದಿದ್ದು ನಾಗಪ್ರಸಾದ್ ಅಪಘಾತದಿಂದಲೇ ಮರಣಪಟ್ಟಿದ್ದಾರೆ ಎಂದು ದೃಢಪಟ್ಟಿರುವುದಾಗಿ ವರದಿಯಾಗಿದೆ.

Also Read  ಕಡಬ: ಹವ್ಯಾಸಿ ಗಾಯಕ ಹೃದಯಾಘಾತದಿಂದ ನಿಧನ

error: Content is protected !!
Scroll to Top