ಹೆರಿಗೆ ವೇಳೆ ತೀವ್ರ ರಕ್ತಸ್ರಾವ- ತಾಯಿ ಮೃತಪಟ್ಟ ಪ್ರಕರಣ ➤ ಒಂದೇ ದಿನದೊಳಗೆ ಹಸುಗೂಸು ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ. 23. ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ಉಂಟಾಗಿ ಬಾಣಂತಿ ಆಶಾ ಕಾರ್ಯಕರ್ತೆ ಮೃತಪಟ್ಟ ಬೆನ್ನಲ್ಲೇ ಇದೀಗ ಅವರ ಹಸುಗೂಸು ಕೂಡ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.


ಆಶಾ ಕಾರ್ಯಕರ್ತೆ ಭವ್ಯರವರು ತನ್ನ ಮೂರನೇ ಹೆರಿಗೆಗಾಗಿ ಜೂ. 20ರಂದು ದಾಖಲಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಸಂದರ್ಭ ತೀವ್ರ ರಕ್ತಸ್ರಾವ ಉಂಟಾಗಿ ಮೃತಪಟ್ಟಿದ್ದರು. ಕಳೆದ ಮಂಗಳವಾರ ರಾತ್ರಿ ಮಗುವನ್ನು ಮಂಗಳೂರಿನ ವೆನ್‍ ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮುಂಜಾನೆ ಮಗುವೂ ಮೃತಪಟ್ಟಿದೆ ಎನ್ನಲಾಗಿದೆ.

Also Read  ನೂತನ ಸ್ಪೀಕರ್ ಖಾದರ್ ವಿರುದ್ಧ ಅವಹೇಳನಾಕಾರಿ ಪೋಸ್ಟ್ ➤ ಶ್ರೀರಾಮಸೇನೆ ಮುಖಂಡನ ವಿರುದ್ಧ ದೂರು

error: Content is protected !!
Scroll to Top