(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. 2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕಾಗಿ ಆನ್‍ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸ್‍ನ ವಿದ್ಯಾರ್ಥಿಗಳಿಂದ ಆಹ್ವಾನಿಸಲಾಗಿದೆ.
ಪ್ರವೇಶ ಬಯಸುವವರು ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು 2023ರ ಜುಲೈ 7ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿ ಪೋಷಕರ ವಾರ್ಷಿಕ ಆದಾಯ ಪ್ರವರ್ಗ-1, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ 2.50 ಲಕ್ಷ ರೂ.ಗಳು, ಪ್ರವರ್ಗ-2ಎ, 2ಬಿ, 3ಎ, 3ಬಿ ಹಾಗೂ ಇತರೆ ಹಿಂದುಳಿದ ವರ್ಗಗಳ ಆದಾಯ 1 ಲಕ್ಷ ರೂ.ಗಳು ಮೀರಿರಬಾರದು. ಅರ್ಜಿ ಸಲ್ಲಿಸಲು ಇಲಾಖೆಯ ವೆಬ್‍ಸೈಟ್- https://bcwd.karnataka.gov.in ಹಾಗೂ ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ಅಥವಾ ದೂ.ಸಂಖ್ಯೆ: 8050770005 ಅನ್ನು ಸಂಪರ್ಕಿಸುವಂತೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.