ಬಾಲಕರ ವಿದ್ಯಾರ್ಥಿ ನಿಲಯಗಳ ಅರ್ಜಿ ಆಹ್ವಾನಕ್ಕೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳಾದ ಮುಲ್ಕಿ, ಮೂಡಬಿದ್ರೆ, ಸುಂಕದಕಟ್ಟೆ, ದರೆಗುಡ್ಡೆ, ಕಡಂದಲೆ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಾದ ಗುರುಪುರ, ಅಶೋಕನಗರದಲ್ಲಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿ ನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ ಸ್ಟಾಟ್ಸ್ ಐಡಿಯೊಂದಿಗೆ ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ ವೆಬ್ ಸೈಟ್: https://shp.karnataka.gov.in/ ರಲ್ಲಿ ಇದೇ ಜೂನ್ 30 ರೊಳಗೆ ಅರ್ಜಿ ಸಲ್ಲಿಸಬಹುದು.

Also Read  ಕಡಬ: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿ 'ನಮ್ಮ ಕ್ಲಿನಿಕ್' ಆರಂಭ ➤ ನಾಳೆ (ಡಿ.14) ಮುಖ್ಯಮಂತ್ರಿ ಬೊಮ್ಮಾಯಿ ಯವರಿಂದ ಉದ್ಘಾಟನೆ


ವಿಶೇಷ ಸೂಚನೆ: ವಿದ್ಯಾರ್ಥಿಗಳು 2023-24ನೇ ಸಾಲಿನಲ್ಲಿ ಬೇರೆ ಶಾಲೆಗಳಿಗೆ ಪ್ರವೇಶ ಪಡೆದಿದ್ದರೆ ಈ ವಿದ್ಯಾರ್ಥಿಗಳ ಸ್ಟಾಟ್ಸ್ ಐಡಿ ಯನ್ನು ಪ್ರಸಕ್ತ ಶಾಲೆಯಲ್ಲಿ, ಸಂಬಂಧಿಸಿದ ಮಾಹಿತಿಯನ್ನು ದೃಢೀಕರಿಸಿ ಅರ್ಜಿ ಸಲ್ಲಿಸುವಂತೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top