ಬಂಟ್ವಾಳ: ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಪ್ರಕರಣ ➤ ಬಸ್ ತಡೆದು ಸ್ಥಳೀಯರ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23.  ಬುಧವಾರದಂದು (ಜೂ. 22) ಗುರುಪುರ ಜಂಕ್ಷನ್ ಬಳಿ ಬಸ್ ಢಿಕ್ಕಿ ಹೊಡೆದು ಬೈಕ್ ಸವಾರ ಪೊಳಲಿ ಕರಿಯಂಗಳ ನಿವಾಸಿ ಸಂತೋಷ್ ಕುಮಾರ್ ಮೃತಪಟ್ಟಿದ್ದು, ಈ ಘಟನೆಯನ್ನು ಖಂಡಿಸಿ ಇಂದು ಬಸ್‌ ಗಳನ್ನು ತಡೆದು ಸ್ಥಳೀಯರು ಕೈಕಂಬ ಜಂಕ್ಷನ್‌ ‌ನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಿಂದಾಗಿ ಕೈಕಂಬದಲ್ಲಿ ಸಂಪೂರ್ಣ ಬ್ಲಾಕ್ ಆಗಿದ್ದು, ಮಳೆಯ ನಡುವೆಯೂ ನೂರಾರು ಮಂದಿ ಸೇರಿ ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಬಜಪೆ ಠಾಣಾ ಪೊಲೀಸರು ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತು ಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Scroll to Top