ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಚನ್ನರಾಯಪಟ್ಟಣ, ಜೂ. 23. ತೆಂಗಿನಕಾಯಿ ಗೊನೆ ಬಿದ್ದು 16 ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಶ್ರವಣಬೆಳಗೊಳ ಹೋಬಳಿಯ ಬಿ.ಚೋಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕನನ್ನು ಶ್ರವಣಬೆಳಗೊಳದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಪ್ರತಿನಿತ್ಯ ತೋಟದ ಕೆಲಸ ಮುಗಿಸಿ ಕಾಲೇಜಿಗೆ ಹೋಗುತ್ತಿದ್ದ ಈತ, ಇಂದು ಬೆಳಗ್ಗೆ ತೋಟದಲ್ಲಿ ಕಾಯಿ ಬಿದ್ದಿದ್ದರಿಂದ ಅವುಗಳನ್ನು ಆಯ್ದು ಒಂದೆಡೆ ಸಾಗಿಸುತ್ತಿದ್ದ ಸಂದರ್ಭ ಏಕಾಏಕಿ ಪ್ರಜ್ವಲ್ ಮೇಲೆ ತೆಂಗಿನಕಾಯಿ ಗೊನೆ ಬಿದ್ದಿದೆ. ಇದರಿಂದ ಅಸ್ವಸ್ಥಗೊಂಡ ಪ್ರಜ್ವಲ್ ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಕೂಡಲೇ ಸ್ಥಳೀಯರು ಆತನನ್ನು ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯೆ ಪ್ರಜ್ವಲ್ ಕೊನೆಯುಸಿರೆಳೆದಿದ್ದಾನೆ. ಈ ಬಗ್ಗೆ ಶ್ರವಣಬೆಳಗೊಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಕಲ್ಲೇಗ :4 ವಾಹನಗಳ ನಡುವೆ ಸರಣಿ ಅಪಘಾತ

 

error: Content is protected !!
Scroll to Top