ಬಂಟ್ವಾಳ: ನಾಗರಹಾವಿನ ಉದರದಲ್ಲಿ ಸುಣ್ಣದ ಡಬ್ಬಿ ಪತ್ತೆ ➤ ಶಸ್ತ್ರಚಿಕಿತ್ಸೆ ಯಶಸ್ವಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 23. ತಾಲೂಕಿನ ವಗ್ಗ ಸಮೀಪದ ಆಲಂಪುರಿ ಸಾಲು ಮರದ ತಿಮ್ಮಕ್ಕ ಉದ್ಯಾನವನದ ಸಮೀಪದ ಮನೆಯೊಂದರ ಬಳಿ ಗಾಯಗೊಂಡು ಪತ್ತೆಯಾಗಿದ್ದ ನಾಗರ ಹಾವೊಂದನ್ನು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಗುಣಮುಖಗೊಳಿಸಿ ಸುರಕ್ಷಿತವಾಗಿ ರಕ್ಷಿತಾರಣ್ಯಕ್ಕೆ ಬಿಡಲಾಗಿದೆ.

ಅಲಂಪುರಿ ನಿವಾಸಿ ವಸಂತಿ ಅವರ ಮನೆ ಬಳಿಯ ಬಿಲವೊಂದರಲ್ಲಿ ಜೂ. 06ರಂದು ನಾಗರ ಹಾವೊಂದು ಪತ್ತೆಯಾಗಿದ್ದು, ಹೊರಗೆ ಬರಲು ಸಾಧ್ಯವಾಗದೆ ಒದ್ದಾಡುತ್ತಿತ್ತು. ಈ ಕುರಿತು ಅವರು ಉರಗ ಪ್ರೇಮಿ ಸ್ನೇಕ್ ಕಿರಣ್ ಗೆ ತಿಳಿಸಿದ್ದು, ಬಳಿಕ ಅವರು ಹಾವನ್ನು ಬಿಲದಿಂದ ಹೊರಗೆ ತೆಗೆದಿದ್ದು, ಆದರೆ ಅದರ ಹೊಟ್ಟೆ ಹಾಗೂ ಕುತ್ತಿಗೆಗೆ ಗಾಯವಾಗಿತ್ತು. ಕಿರಣ್ ಅವರು ಅದನ್ನು ಮಂಗಳೂರಿನ ಪಶುವೈದ್ಯ ಡಾ.ಯಶಸ್ವಿ ಅವರ ಬಳಿ ತೋರಿಸಿದಾಗ ಪರೀಕ್ಷಿಸಿದ ವೈದ್ಯರು ಪ್ರಾರಂಭದಲ್ಲಿ ಹರಿದ ಚರ್ಮಕ್ಕೆ ಹೊಲಿಗೆ ಹಾಕಿದ್ದು, ಆದರೂ ಅದರ ಹೊಟ್ಟೆಯಲ್ಲಿ ಏನೋ ಇದೆ ಎಂದು ಸಂಶಯಗೊಂಡು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆಗ ಹೊಟ್ಟೆಯೊಳಗೆ ಸುಣ್ಣ ತುಂಬುವ ಪ್ಲಾಸ್ಟಿಕ್ ಪತ್ತೆಯಾಗಿದ್ದು, ಅದನ್ನು ಯಶಸ್ವಿಯಾಗಿ ಹೊರಗೆ ತೆಗೆಯಲಾಗಿದೆ. ಡಾ.ಯಶಸ್ವಿಯವರು ಹಾವನ್ನು ಸುಮಾರು 15 ದಿನಗಳ ಕಾಲ ಅಬ್ಸರ್ವೇಶನ್ ನಲ್ಲಿಟ್ಟು ಬಳಿಕ ಸ್ನೇಕ್ ಕಿರಣ್ ಅವರು 3 ದಿನ ಮನೆಯಲ್ಲಿಟ್ಟು ಪ್ರಸ್ತುತ ಅದನ್ನು ಬಂಟ್ವಾಳ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ಹಾಗೂ ರಕ್ಷಕ ಮನೋಜ್ ಅವರ ನೆರವಿನಿಂದ ರಕ್ಷಿತಾರಣ್ಯಕ್ಕೆ ಬಿಡಲಾಗಿದೆ.

error: Content is protected !!
Scroll to Top