ಬೈಕ್- ಲಾರಿ ನಡುವೆ ಢಿಕ್ಕಿ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಡಿಕೇರಿ, ಜೂ. 23. ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರನ ದೇಹ ಎರಡು ತುಂಡಾಗಿ ಮೃತಪಟ್ಟ ಘಟನೆ ಕುಶಾಲನಗರದ ಕುಡ್ಲೂರು ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ಹಾಸನ ಜಿಲ್ಲೆಯ ಅರಸೀಕೆರೆಯ ಗಂಗಾಧರ ಎಂದು ಗುರುತಿಸಲಾಗಿದೆ. ಕುಶಾಲನಗರದಲ್ಲಿ ವಿದ್ಯುತ್ ಕಂಬದ ಕೆಲಸ ಮಾಡುತ್ತಿದ್ದ ಈತ ಕೆಲಸ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಪರಿಣಾಮ ಸವಾರನ ಮೇಲೆ ಲಾರಿ ಹರಿದು, ದೇಹ ಎರಡು ತುಂಡಾಗಿದೆ. ಈ ಕುರಿತು ಕುಶಾಲನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ರಕ್ಷಣಾ ಸಚಿವಾಲಯದ ಸಲಹಾ ಸಮಿತಿ ಸದಸ್ಯರಾಗಿ ದ.ಕ. ಸಂಸದ ಚೌಟ ನೇಮಕ

error: Content is protected !!
Scroll to Top