ಬೆಳ್ಳಾರೆ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ. 23. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಯುವಕನನ್ನು ಬಂಧಿಸಿ ಪೋಕ್ಸೋ ಪ್ರಕರಣದಡಿ ದೂರು ದಾಖಲಿಸಿದ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ.

ಬಂಧಿತನನ್ನು ಕಲ್ಮಡ್ಕದ ಕಾಪಡ್ಕ ಚಿದಾನಂದ ಎಂದು ಗುರುತಿಸಲಾಗಿದೆ. ಈತ ಕೊಡಿಯಾಲದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ, ಅತ್ಯಾಚಾರ ಎಸಗಿರುವುದಾಗಿ ಬಾಲಕಿಯ ಮನೆಯವರು ನೀಡಿದ ದೂರಿನಂತೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top