‘ಗೃಹಜ್ಯೋತಿ’ ಅರ್ಜಿ ಸಲ್ಲಿಕೆಗೆ ಹಣ ಪಡೆಯುವಂತಿಲ್ಲ ➤ ಹಣ ಪಡೆದಲ್ಲಿ ಏಜೆನ್ಸಿ ಲೈಸೆನ್ಸ್ ರದ್ದು- ಡಿಕೆಶಿ ಖಡಕ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 23. ಕಾಂಗ್ರೆಸ್ ಸರಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುತ್ತಿದ್ದು, ಇತ್ತ ಅರ್ಜಿ ಸಲ್ಲಿಕೆಗೆ ಕೆಲವು ಕೇಂದ್ರಗಳಲ್ಲಿ ಹಣ ವಸೂಲಿ ಮಾಡುತ್ತಿರುವ ದೂರು ಕೇಳಿಬರುತ್ತಿರುವ ಹಿನ್ನೆಲೆ, ಜನರಿಂದ ಹಣ ಪಡೆಯುವಂತಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.


ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ಯಾರೂ ಹಣ ತೆಗೆದುಕೊಳ್ಳುವಂತಿಲ್ಲ. ಒಂದು ವೇಳೆ ಹಣ ಪಡೆದರೆ ಅಂತಹ ಏಜೆನ್ಸಿಯ ಲೈಸೆನ್ಸ್ ರದ್ದುಗೊಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Also Read  ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

error: Content is protected !!
Scroll to Top