ಆಲಂಕಾರು: ಬ್ರೈನ್ ಎಮರೇಜ್ ಗೆ ತುತ್ತಾಗಿದ್ದ ಆಟೋ ಚಾಲಕ ಚಿಕಿತ್ಸೆ ಫಲಿಸದೇ ಮೃತ್ಯು

(ನ್ಯೂಸ್ ಕಡಬ) newskadaba.com ಆಲಂಕಾರು, ಜೂ. 23. ಬ್ರೈನ್ ಎಮರೇಜ್‌ಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಆಲಂಕಾರಿನ ರಿಕ್ಷಾ ಚಾಲಕರೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಕುರಿತು ವರದಿಯಾಗಿದೆ.

ಮೃತ ರಿಕ್ಷಾ ಚಾಲಕನನ್ನು ಕಡಬ ತಾಲೂಕಿನ ಆಲಂಕಾರು ಗ್ರಾಮದ ನೆಕ್ಕಿಲಾಡಿ ನಿವಾಸಿ ಕಮಲಾಕ್ಷ ಗೌಡ ಎಂದು ಗುರುತಿಸಲಾಗಿದೆ. ಇವರು ಜೂ. 20ರಂದು ಬೆಳಗ್ಗೆ ಏಕಾಏಕಿ ಅನಾರೋಗ್ಯಕ್ಕೆ ಒಳಗಾಗಿದ್ದರು. ಅವರ ಸಹೋದರ ತಕ್ಷಣ ಆಲಂಕಾರಿನ ಕ್ಲಿನಿಕ್‌ಗೆ ಕರೆತಂದು ಬಳಿಕ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಬಳಿಕ ಅಲ್ಲಿನ ವೈದ್ಯರ ಸಲಹೆಯಂತೆ ಅದೇ ದಿನ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಕಮಲಾಕ್ಷ ಗೌಡರವರು ಗುರುವಾರದಂದು ಮೃತಪಟ್ಟಿದ್ದಾರೆ.

Also Read  ವಿಟ್ಲ: ಪತ್ರಕರ್ತರೋರ್ವರ ಮೇಲೆ ದಾಳಿ ನಡೆಸಿದ ಒಂಟಿ ಮಂಗ ► ಗಾಯಾಳು ಪತ್ರಕರ್ತ ಆಸ್ಪತ್ರೆಗೆ ದಾಖಲು

error: Content is protected !!
Scroll to Top