ಬೆಳ್ತಂಗಡಿ: ವಿವಾಹಿತ ಮಹಿಳೆ ಮಗುವಿನೊಂದಿಗೆ ನಾಪತ್ತೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 24. ಗುರುವಾಯನಕೆರೆಯ ಬಾಡಿಗೆ ಕೊಠಡಿಯೊಂದರಲ್ಲಿ ವಾಸಿಸುತ್ತಿದ್ದ ವಿವಾಹಿತ ಮಹಿಳೆಯೋವರು ತನ್ನ ನಾಲ್ಕು ವರ್ಷದ ಮಗನೊಂದಿಗೆ ನಾಪತ್ತೆಯಾದ ಕುರಿತು ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಾಪತ್ತೆಯಾದವರನ್ನು ಕಡಬ ತಾಲೂಕಿನ ಬೆಳಂದೂರು ಗ್ರಾಮದ ನಿವಾಸಿ ನವೀನ್ ಕೆ.ಆರ್ ಅವರ ಪತ್ನಿ ಕವನ(25) ಜೂ. 06ರಂದು ರಾತ್ರಿ ಊಟ ಮುಗಿಸಿ ಮಲಗಿದ್ದರು. ಆದರೆ, ಬೆಳಗ್ಗೆ ಪತಿ ಎದ್ದು ನೋಡಿದಾಗ ನಾಲ್ಕು ವರ್ಷದ ಮಗ ಹಾಗೂ ಪತ್ನಿ ನಾಪತ್ತೆಯಾಗಿದ್ದರು. 2022ರಲ್ಲಿಯೂ ಕವನಾ ನಾಪತ್ತೆಯಾಗಿದ್ದು, ಬೆಳ್ತಂಗಡಿ ಪೊಲೀಸರು ಆಕೆಯನ್ನು ಪರಿಚಯಸ್ಥರ ಜೊತೆಗೆ ಪತ್ತೆ ಹಚ್ಚಿದ್ದರು. ಇದೀಗ ಮತ್ತೆ ನಾಪತ್ತೆಯಾಗಿದ್ದಾಳೆ. ಈ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಕೊಂಬಾರಿನ ಲೋಕೇಶ್ ಎಂಬವರಿಗೆ ಅರಣ್ಯಾಧಿಕಾರಿಗಳಿಂದ ಹಲ್ಲೆ ಆರೋಪ ➤ ಅಮಾಯಕನಿಗೆ ಹಲ್ಲೆ- ಸೆ.21ರಂದು ಕೆಂಜಾಳದಲ್ಲಿ ಪ್ರತಿಭಟನೆ

error: Content is protected !!
Scroll to Top