(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 24. ಇಂದು ಬೆಳಗ್ಗೆ 10 ಗಂಟೆಗೆ ‘ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ’ ವನ್ನು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಅರ್ಬನ್ ಹಾಥ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಬಗೆಯ ಮಾವು, ಹಲಸಿನ ಹಣ್ಣುಗಳು, ಸ್ಥಳೀಯ ಮತ್ತು ವಿದೇಶೀ ಪಾನೀಯಗಳು ಹಾಗೂ ಗಿಡಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ನಗರದ ಪತ್ರಕರ್ತರು ನೇರವಾಗಿ ಆಗಮಿಸಲು ಕೋರಲಾಗಿದೆ.
ಪತ್ರಕರ್ತರಿಗೆ ಆಹ್ವಾನ
