ಗೃಹಲಕ್ಷ್ಮೀ ಯೋಜನೆಗೆ ಜೂ. 27ರಿಂದ ಅರ್ಜಿ ಸಲ್ಲಿಕೆ ಶುರು- ಸಚಿವೆ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರುಜೂ. 24. ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ನಡೆಸಲಾದ ಸಭೆಯಲ್ಲಿ ಗೃಹಲಕ್ಷ್ಮೀ ಯೋಜನೆ ಸಂಬಂಧ ಚರ್ಚೆ ನಡೆಸಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರು ಹೇಳಿದ್ದಾರೆ.

ಈ ಕುರಿತು ಮಾತಾಡಿದ ಅವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಂದಾಯ, ಗ್ರಾಮೀಣಾಭಿವೃದ್ಧಿ ಸೇರಿ ಮೂರು ಇಲಾಖೆಯ ಸಚಿವರು, ಜೊತೆಗೆ ಅಧಿಕಾರಿಗಳು ಸುದೀರ್ಘವಾಗಿ ಸಭೆ ನಡೆಸಿದ್ದೇವೆ. ಅರ್ಜಿ ಸಲ್ಲಿಕೆಗೆ ಬೇಕಾದ ಸಾಫ್ಟ್ ವೇರ್ ಸಿದ್ಧವಾಗಿದೆ. ಜೂ. 27ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ತಿಳಿಸಿದರು.

Scroll to Top