ಪುತ್ತೂರು: ಪತಿಯಿಂದ ಹಿಂಸೆ ➤ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 24. ಪತ್ನಿಗೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿದ ಕುರಿತು ಗಂಡನ ವಿರುದ್ದ ಪತ್ನಿ ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ನಿವಾಸಿ ನ್ಯಾಯಾಲಯಕ್ಕೆ ನೀಡಿದ ಖಾಸಗಿ ದೂರಿಗೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ನ್ಯಾಯಾಲಯ ಆದೇಶಿಸಿದ್ದು, ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ದೂರುದಾರ ಮಹಿಳೆ 2018ರ ಫೆ. 01ರಂದು ಕಾವೇರಿಕಟ್ಟೆಯ ವ್ಯಕ್ತಿಯೊಂದಿಗೆ ವಿವಾಹವಾಗಿದ್ದು, ಇವರಿಗೆ ಮೂರು ವರ್ಷದ ಮಗು ಕೂಡಾ ಇದೆ. ಆದರೆ ಪತಿ ನಿರಂತರ ಹಿಂಸೆ ನೀಡುತ್ತಿದ್ದಾರೆ. ಹಲವು ಬಾರಿ ಹಲ್ಲೆ ನಡೆಸಿ ಬೆದರಿಕೆಯೊಡ್ಡಿದ್ದಾರೆ ಎಂದು  ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದಾರೆ. ದೂರನ್ನು ಸ್ವೀಕರಿಸಿದ ನ್ಯಾಯಾಲಯ ಗಂಡನ ವಿರುದ್ದ ಪ್ರಕರಣ ದಾಖಲಿಸುವಂತೆ ನೀಡಿದ ದೇಶದ ಮೇರೆಗೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಮಂಗಳೂರು: ಗೃಹರಕ್ಷಕದಳ ಕಛೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

error: Content is protected !!
Scroll to Top