ಪುತ್ತೂರು: ಬಸ್ಸಿನಲ್ಲಿ ಮಹಿಳೆಗೆ ಕಿರುಕುಳ ➤ ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 24. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿವಾಹಿತ ಮಹಿಳೆಗೆ ಸಹ ಪ್ರಯಾಣಿಕನೋರ್ವ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿ ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಕೆಮ್ಮಿಂಜೆ ಗ್ರಾಮದ ಸುಬ್ರಹ್ಮಣ್ಯ ಭಟ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲ್ಲೂಕಿನ ಕರೋಪಾಡಿ ಗ್ರಾಮದ ಕನ್ಯಾನ ಕುಕ್ಕಾಜೆ ನಿವಾಸಿ ಮಹಮ್ಮದ್ ಅಶ್ರಫ್ ಅವರ ಪತ್ನಿ ಶಹನಾಝ್, ತನ್ನ ತಾಯಿಯೊಂದಿಗೆ ಉಪ್ಪಳದಿಂದ ಪುತ್ತೂರಿಗೆ ಬಸ್ ನಲ್ಲಿ ತೆರಳುತ್ತಿದ್ದ ವೇಳೆ ಹಿಂದಿನ ಸೀಟಿನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಸೀಟಿನ ಮಧ್ಯದಲ್ಲಿ ಕೈಹಾಕಿ ಹಿಂಬದಿ ಸೊಂಟದ ಕೆಳ ಭಾಗವನ್ನು ಹಿಡಿದು ಅಶ್ಲೀಲವಾಗಿ ವರ್ತಿಸಿದ್ದಾನೆ. ಯಾಕೆ ಈ ರೀತಿಯಾಗಿ ವರ್ತಿಸುತ್ತೀರಿ ಎಂದು ಪ್ರಶ್ನಿಸುತ್ತಿದ್ದಂತೆಯೇ ಆತ ಬೊಳುವಾರಿನಲ್ಲಿ ಬಸ್ಸಿನಿಂದ ಇಳಿದು ಹೋಗಿದ್ದಾನೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಹಾಯಕ ಅರ್ಚಕನಾಗಿ ಕೆಲಸ ಮಾಡುತ್ತಿರುವ ಆರೋಪಿ ಸುಬ್ರಹ್ಮಣ್ಯ ಭಟ್‌ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಯನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ.

Also Read  ಕಡಬ ಜನಸಂಪರ್ಕ ಸಭೆ ► 94ಸಿ ಜಾಗದ ಹಕ್ಕುಪತ್ರದಲ್ಲಿ ತಾರತಮ್ಯ ಆರೋಪ

error: Content is protected !!
Scroll to Top