(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 24. ಲಾಡ್ಜ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಕುರಿತ ಮಾಹಿತಿಯನುಸಾರ ದಾಳಿ ನಡೆಸಿದ ಪೊಲೀಸರು ಇಬ್ಬರು ಮಹಿಳೆಯರನ್ನು ರಕ್ಷಿಸಿ, ಓರ್ವ ಆರೋಪಿಯನ್ನು ಬಂಧಿಸಿರುವ ಕುರಿತು ಮಂಗಳೂರಿನ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಂಧಿತನನ್ನು ಮಂಡ್ಯದ ಮಗ್ಗನ್ ಕೊಪ್ಪಲ್ ನಿವಾಸಿ ಲಕ್ಕಪ್ಪ ಎಂದು ಗುರುತಿಸಲಾಗಿದೆ. ಕೃಷ್ಣ ಎಂಬಾತನು ಫ್ಲ್ಯಾಟ್ ಬಾಡಿಗೆಗೆ ಪಡೆದು ಇದರಲ್ಲಿ ಲಕ್ಕಪ್ಪನ ಜೊತೆ ಸೇರಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಲಕ್ಕಪ್ಪನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಇನ್ನೋರ್ವ ಆರೋಪಿ ಕೃಷ್ಣ ಹಾಗೂ ಇತರರ ಪತ್ತೆಗೆ ಶೋಧ ಕಾರ್ಯ ಮುಂದುವರೆಸಿದ್ದಾರೆ.