ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ ➤ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜೂ. 24. ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ  ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ಈ ಕುರಿತು ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ಎಂಪಿ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ತಿಳಿಸಿದ್ದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ರಾಜ್ಯಾಧ್ಯಕ್ಷರ ನೇಮಕ ಕುರಿತು ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾಗಿ ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಪ್ರಸಾರ ಮಾಡಲಾಗುತ್ತಿದೆ ಎಂದು ವಿವರಿಸಿದ್ದಾರೆ.

Also Read  ವಿವಾಹಿತನಿಂದ ಯುವತಿಯ ಅಪಹರಣ ► ತಾಳಿ ಕಟ್ಟಿ ಅತ್ಯಾಚಾರ

error: Content is protected !!
Scroll to Top