ಮಂಗಳೂರು: ಸಚಿವ ದಿನೇಶ್ ಗುಂಡೂರಾವ್ ರವರಿಂದ ಪ್ರಗತಿ ಪರಿಶೀಲನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 24. ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರದಂದು ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯು ನಡೆಯಿತು.

ಈ ಸಂದರ್ಭದಲ್ಲಿ ರಾಜ್ಯ ವಿಧಾನಸಭೆಯ ಸಭಾಪತಿಗಳಾದ ಯು.ಟಿ. ಖಾದರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ನಗರ ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಜೈನ್, ಎಸ್ಪಿ ರಿಷ್ಯಂತ್, ಡಿಸಿಪಿ ಅಂಶುಕುಮಾರ್, ಶಾಸಕರಾದ ಡಿ. ವೇದವ್ಯಾಸ ಕಾಮತ್, ಉಮನಾಥ್ ಕೋಟ್ಯಾನ್, ರಾಜೇಶ್ ನಾಯ್ಕ್, ಅಶೋಕ್ ಕುಮಾರ್ ರೈ, ಭಾಗಿರಥಿ ಮುರುಳ್ಯ ಹಾಗೂ ಹರೀಶ್ ಪೂಂಜಾ, ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ವೇದಿಕೆಯಲ್ಲಿದ್ದರು.

Also Read  ಕೆಮ್ಮಾರ ಸರಕಾರಿ ಶಾಲೆಯಲ್ಲಿ ಸ್ವಾತಂತ್ರೊತ್ಸವದ ಪ್ರಯುಕ್ತ ಧ್ವಜಾರೋಹಣ ಮತ್ತು ಅದ್ದೂರಿ ಸಾಂಸ್ಕೃತಿಕ ಕಾರ್ಯಕ್ರಮ*

error: Content is protected !!
Scroll to Top