ಗರ್ಭಧರಿಸಿದ 9ನೇ ತರಗತಿಯ ಬಾಲಕಿ ➤ ಪೊಲೀಸ್ ಅಧಿಕಾರಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕೊಚ್ಚಿ, ಜೂ. 24. ಹೊಟ್ಟೆ ನೋವೆಂದು ಆಸ್ಪತ್ರೆಗೆ ಹೋದ ಬಾಲಕಿ ಗರ್ಭಿಣಿಯಾಗಿರುವ ಸುದ್ದಿ ಹೊರಬೀಳುತ್ತಿದ್ದಂತೆಯೇ ಪೊಲೀಸ್​ ಅಧಿಕಾರಿಯೊಬ್ಬರನ್ನು ಅರ್ಯಾಂಕೋಡ್​ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಕೇರಳದ ವೆಲ್ಲರಾಡದಲ್ಲಿ ನಡೆದಿದೆ.

ಬಂಧಿತರನ್ನು ಮರಯೂರ್​ ಠಾಣಾ​ ಸಿಪಿಒ ದಿಲೀಪ್​ (43) ಎಂದು ಗುರುತಿಸಲಾಗಿದೆ. ಬಂಧಿಸಿದ್ದಾರೆ. 9ನೇ ತರಗತಿಯ ಸಂತ್ರಸ್ತೆ ಕಳೆದ ಕೆಲವು ದಿನಗಳಿಂದ ಹೊಟ್ಟೆ ನೋವು ಅನುಭವಿಸುತ್ತಿದ್ದು, ಇತ್ತೀಚೆಗೆ ಹೊಟ್ಟೆನೋವು ಜಾಸ್ತಿಯಾಗಿದ್ದರಿಂದ ಪಾಲಕರು ಬಾಲಕಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷಿಸಿದಾಗ ಆಕೆ ಗರ್ಭಿಣಿ ಎಂಬುವುದು ಬೆಳಕಿಗೆ ಬಂದಿದೆ. ಆಕೆಯನ್ನು ವಿಚಾರಿಸಿದಾಗ ತನ್ನ ದೂರದ ಸಂಬಂಧಿಯೇ ಆಗಿರುವ ಆರೋಪಿ ದಿಲೀಪ್ ನ ಕಾಮಕಾಂಡವನ್ನು ಬಿಚ್ಚಿಟ್ಟಿದ್ದು, ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ. 

Also Read  ಕಾಸರಗೋಡು: ಸಹ ಶಿಕ್ಷಕನಿಂದಲೇ ಶಿಕ್ಷಕಿಯ ಕೊಲೆ; ಕ್ರೈಂ ಬ್ರಾಂಚ್ ತನಿಖೆಯಿಂದ ಬಹಿರಂಗ

error: Content is protected !!
Scroll to Top