ಟ್ರ್ಯಾಕ್ಟರ್ ಗೆ ಢಿಕ್ಕಿ ಹೊಡೆದು ಹಳಿತಪ್ಪಿದ ಗೂಡ್ಸ್ ರೈಲು ➤ 6 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಜೂ. 24. ಟ್ರ್ಯಾಕ್ಟರ್​ಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಆಗ್ರಾ ಬಳಿ ಶನಿವಾರ ನಡೆದಿದೆ.

ಇಂದು ಬೆಳಗ್ಗೆ ಬಂಸಿಪಹಾರ್‌ಪುರ-ರೂಪ್ ಬಾಸ್ ರೈಲು ವಿಭಾಗದಲ್ಲಿ ಗೂಡ್ಸ್ ರೈಲೊಂದು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು, ಗೂಡ್ಸ್ ರೈಲು ಹಳಿ ತಪ್ಪಿದ್ದರಿಂದ ಆರು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದಿಂದ ಹೆಚ್ಚಿನ ಹಾನಿಯಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

error: Content is protected !!

Join the Group

Join WhatsApp Group